ಪುತ್ತೂರು ಅಂಚೆ ವಿಭಾಗದ ಅರ್ಧ ವಾರ್ಷಿಕ ಪಿಂಚಣಿ ಅದಾಲತ್

ಭಾರತೀಯ ಅಂಚೆ ಇಲಾಖೆ


ಪಿಂಚಣಿ ಅದಾಲತ್


ಪುತ್ತೂರು ಅಂಚೆ ವಿಭಾಗದ ಅರ್ಧ ವಾರ್ಷಿಕ ಪಿಂಚಣಿ ಅದಾಲತ್ ದಿನಾಂಕ 02.12.2022 ರಂದು ಪೂರ್ವಾಹ್ನ 11.00 ಗಂಟೆಗೆ ಪುತ್ತೂರು ಅಂಚೆ ವಿಭಾಗದ ಹಿರಿಯ ಅಂಚೆ ಅಧೀಕ್ಷಕರ ಕಛೇರಿಯಲ್ಲಿ ನಡೆಯಲಿದೆ.

ಈ ಅದಾಲತ್ತಿನಲ್ಲಿ ಪುತ್ತೂರು ಅಂಚೆ ವಿಭಾಗದಿಂದ ನಿವೃತ್ತಿ ಹೊಂದಿ ಪಿಂಚಣಿ ಪಡೆಯುವ ಅಂಚೆ ಪಿಂಚಣಿದಾರರ ಕುಂದು ಕೊರತೆಗಳನ್ನು ಪರಿಶೀಲಿಸಲಾಗುವುದು.
ಕುಂದು ಕೊರತೆಗಳನ್ನು ಕಳುಹಿಸಲು ಇಚ್ಚಿಸುವ ಅಂಚೆ ಪಿಂಚಣಿದಾರರು ಬರಹ ಮೂಲಕ ದಿನಾಂಕ 30.11.2022 ರ ಮೊದಲು ತಲುಪುವಂತೆ ಪುತ್ತೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕರು, ಪುತ್ತೂರು 574201 ಇವರಿಗೆ `ಪಿಂಚಣಿ ಅದಾಲತ್‌ನಲ್ಲಿ ವಿಚಾರಣೆಗಾಗಿ‘ ಎಂಬ ಮೇಲ್ಬರಹ ಹೊಂದಿದ ಲಕೋಟೆಯಲ್ಲಿ ಕಳುಹಿಸಬಹುದು. 02.12.2022 ರ 11.00 ಗಂಟೆಗೆ ಕಚೇರಿಯಲ್ಲಿ ಹಾಜರಿದ್ದರೆ ಸಮಕ್ಷಮ ಪರಿಶೀಲಿಸಲು ಅನುಕೂಲವಾಗುವುದು.

ಇದನ್ನೂ ಓದಿ:

Leave a Comment